ADVERTISEMENT

‘ಕ್ರಿಯಾಶೀಲ ರಾಜಕಾರಣಿಗಳ ಅಗತ್ಯವಿದೆ’

​ಪ್ರಜಾವಾಣಿ ವಾರ್ತೆ
Published 13 ಮೇ 2018, 19:30 IST
Last Updated 13 ಮೇ 2018, 19:30 IST
ಜೆಪಿ ನಗರದ ಮಿನಿ ಪಾರೆಸ್ಟ್‌ ಪಾರ್ಕ್‌ನಲ್ಲಿ ಅದಮ್ಯ ಚೇತನ ಭಾನುವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ತೇಜಶ್ವಿನಿ ಅನಂತಕುಮಾರ್‌, ಲಕ್ಷ್ಮೀ ನಟರಾಜ್‌, ಜಯರಾಮ್‌,ನಟರಾಜ್‌ ಜಯನಗರ ಶಾಸಕ ಬಿ.ಎನ್‌.ವಿಜಯಕುಮಾರ್‌ ಅವರ ಭಾವ ಚಿತ್ರಕ್ಕೆ ಪುಷ್ಫ ನಮನ ಸಲ್ಲಿ ಸಿದರು–ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಬಿ.ಎನ್‌.ವಿಜಯಕುಮಾರ್‌ ಅವರಂತಹ ಕ್ರಿಯಾಶೀಲ ಹಾಗೂ ಪ್ರಾಮಾಣಿಕ ರಾಜಕಾರಣಿಗಳ ಅಗತ್ಯವಿದೆ’ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ವಿಜಯಕುಮಾರ್ ಅವರ ನೆನಪಿನಾರ್ಥ ಅದಮ್ಯ ಚೇತನ ಸಂಸ್ಥೆ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಜಯಕುಮಾರ್ ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಕೆಂಪೇಗೌಡರ ಹಾದಿಯನ್ನು ಅನುಸರಿಸಿದ್ದ ಅವರು ಬೆಂಗಳೂರಿನ ಭವಿಷ್ಯದ ಕುರಿತು ಸಾಕಷ್ಟು ಕನಸು ಕಂಡಿದ್ದರು. ಶುದ್ಧ ಗಾಳಿ, ನೀರು ಸಿಗಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಿದ್ದರು’ ಎಂದರು.

ADVERTISEMENT

‘ಮತದಾನ ಪ್ರಜಾಪ್ರಭುತ್ವದ ಬುನಾದಿ. ಆದರೆ ಬೆಂಗಳೂರಿನ ಜನರು ಮತದಾನ ಪ್ರಕ್ರಿಯೆಯಲ್ಲಿ ನಿರಾಸಕ್ತಿ ತೋರಿಸುತ್ತಿರುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.