ADVERTISEMENT

ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST
ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ
ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ   

ಯಲಹಂಕ: `ಕ್ರೀಡಾಪಟುಗಳು ದೈಹಿಕ ಶಿಕ್ಷಕರಾಗಿ ಬಡ್ತಿ ಹೊಂದಿದ ನಂತರ ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೆ ದಿನಕ್ಕೆ ಕನಿಷ್ಠ ಒಂದು ಗಂಟೆಯಾದರೂ ಮಕ್ಕಳಿಗೆ ಆಟದ ಬಗ್ಗೆ ತರಬೇತಿ ನೀಡುವ ಮೂಲಕ ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಬೇಕು~ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ಕೊಕೋ ಹಾಗೂ ಕಬಡ್ಡಿ ತರಬೇತುದಾರ ಎಸ್. ಪ್ರಕಾಶ್ ಸಲಹೆ ನೀಡಿದರು.

ಕ್ರೀಡಾ ರತ್ನ ಯೂತ್ ಅಸೋಸಿಯೇಷನ್ ವತಿಯಿಂದ ಭಾನುವಾರ ಹೆಬ್ಬಾಳದ ಚೋಳ ನಾಯಕನಹಳ್ಳಿಯ ಸುಮಂಗಲಿ ಸೇವಾಶ್ರಮದಲ್ಲಿ ಆಯೋಜಿಸಿದ್ದ 2010-11ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸುಮಂಗಲಿ ಸೇವಾಶ್ರಮದ ಸಂಸ್ಥಾಪಕಿ ಎಸ್.ಜಿ. ಸುಶೀಲಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪ್ಪಾರಪೇಟೆ ಠಾಣೆ ಇನ್ಸ್‌ಪೆಕ್ಟರ್ ಲೋಕೇಶ್ವರ, ಸಮಾಜ ಸೇವಕರಾದ ವಿ.ಶಾಮಣ್ಣ, ಪದ್ಮನಾಭ, ಬೆಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಪ್ರಾಂಶುಪಾಲ ಪ್ರೊ.ಡಾ.ಆರ್.ಶ್ರೀನಿವಾಸ್,  ಸಂಘದ ಉಪಾಧ್ಯಕ್ಷ ಎ.ವಿ.ದೇವರಾಜು ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.