ADVERTISEMENT

`ಕ್ರೀಡೆಗಳಿಂದ ಯುವಕರ ಭವಿಷ್ಯ ಉಜ್ವಲ'

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಸವಲಿಂಗಪ್ಪ ನಗರದಲ್ಲಿ ಈಚೆಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಶಾಸಕ ಕೃಷ್ಣಬೈರೇಗೌಡ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರವಿಕುಮಾರ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಕುಮಾರ್ ಮತ್ತಿತರರು ಚಿತ್ರದಲ್ಲಿದ್ದಾರೆ

ಯಲಹಂಕ: `ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಯುವಕರ ಭವಿಷ್ಯ ಉತ್ತಮ ರೀತಿಯಲ್ಲಿ ರೂಪುಗೊಳ್ಳುತ್ತದೆ' ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಸವಲಿಂಗಪ್ಪ ನಗರದಲ್ಲಿ ಜಕ್ಕೂರು ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಈಚೆಗೆ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಗೋಪಾಲಯ್ಯ, ನಗರಸಭೆಯ ಮಾಜಿ ಅಧ್ಯಕ್ಷ ಶ್ರೀನಿವಾಸರಾಜು, ಕಾಂಗ್ರೆಸ್ ಮುಖಂಡರಾದ ಆಂಜಿನಪ್ಪ, ಸುಬ್ರಮಣಿ, ಗುರುಪ್ರಸಾದ್, ಆನಂದ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.