
ಪ್ರಜಾವಾಣಿ ವಾರ್ತೆಬೆಂಗಳೂರು: `ಕುಂಬಾರ ಸಮುದಾಯ ಕುರಿತು ವ್ಯಂಗ್ಯವಾಗಿ ಹೇಳಿಕೆ ನೀಡಿರುವ ಶಾಸಕ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು' ಎಂದು ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ನಾಗೇಶ್ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಡಿ.ಕೆ. ಶಿವಕುಮಾರ್ ಅವರು ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಯಾವುದೇ ಬೇಸರವಿಲ್ಲ. `ನಾನು ಎತ್ತಿಹಾಕಿದರೆ ಛಿದ್ರವಾಗುವ ಕುಂಬಾರರ ಮಡಿಕೆಯಲ್ಲ, ಗಟ್ಟಿಯಾದ ಹಿತ್ತಾಳೆ ಪಾತ್ರೆ' ಎಂದು ಹೇಳಿಕೆ ನೀಡಿ ಕುಂಬಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ' ಎಂದರು.
ಈ ಕುರಿತು ಅವರು ಶೀಘ್ರ ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಅವರ ಮನೆ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.