ADVERTISEMENT

ಖಾಸಗಿ ಶಾಲೆಗಳ ವಿರುದ್ಧ ಕ್ರಮದ ವರದಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:50 IST
Last Updated 11 ಅಕ್ಟೋಬರ್ 2017, 19:50 IST

ಬೆಂಗಳೂರು: ಶಿಕ್ಷಕರಿಗೆ ಚೆಕ್‌ ಮೂಲಕ ವೇತನ ಪಾವತಿಸದ ಖಾಸಗಿ ಶಾಲೆಗಳ ವಿರುದ್ಧ ಸ್ಥಳೀಯವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿದೆ.

ಶಿಕ್ಷಕರಿಗೆ ಸಂಬಳವನ್ನು ಚೆಕ್ ಮೂಲಕ ಪಾವತಿಸುವುದನ್ನು ಕಡ್ಡಾಯ ಮಾಡಲಾಗಿದೆ. ಆದರೂ ಬೆಂಗಳೂರು ಮತ್ತು ಮೈಸೂರು ಇದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ ಎಂಬ ದೂರುಗಳೂ ಇವೆ.

ಸೇವಾ ಭದ್ರತೆ ಒದಗಿಸದ ಶಾಲೆಗಳ ವಿರುದ್ಧ ನೋಟಿಸ್ ಜಾರಿ ಮಾಡುವಂತೆ ಹಿಂದೆ ಸೂಚಿಸಲಾಗಿತ್ತು. ಈ ನೋಟಿಸ್‌ಗೆ ಶಾಲೆಗಳು ನೀಡಿದ ವರದಿ ಮತ್ತು ಅದರ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಇದೇ 15ರೊಳಗೆ ವಿವರ ನೀಡಬೇಕು ಎಂದು ಪ್ರೌಢ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.