ADVERTISEMENT

ಗಡಿನಾಡ ಅಭಿವೃದ್ಧಿಗೆ ಹಣ ಮೀಸಲಿಡಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ಬೆಂಗಳೂರು: `ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಗಡಿನಾಡ ಕನ್ನಡಿಗರಿಗಾಗಿ ಐನೂರು ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು~ ಎಂದು ವಾಟಾಳ್ ಕನ್ನಡ ಪಕ್ಷದ ವಾಟಾಳ್ ನಾಗರಾಜ್ ಒತ್ತಾಯಿಸಿದರು.

ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

`1956ರ ನಂತರ ಬಂದ ಎಲ್ಲ ಸರ್ಕಾರಗಳು ರಾಜ್ಯದ ಗಡಿನಾಡಿನ ಜನರನ್ನು ತೀವ್ರವಾಗಿ ನಿರ್ಲಕ್ಷ್ಯಿಸಿವೆ. ಅಲ್ಲಿನ ಜನತೆ ಕುಡಿಯುವ ನೀರು, ಕನ್ನಡ ಶಾಲೆ ಸೇರಿದಂತೆ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದನ್ನು ಪರಿಹರಿಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.