ADVERTISEMENT

ಗಾಜು ಒಡೆದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 19:59 IST
Last Updated 19 ಜೂನ್ 2013, 19:59 IST

ಬೆಂಗಳೂರು: ಶೇಷಾದ್ರಿಪುರ ಸಮೀಪದ ಕುಮಾರ ಕೃಪಾ ರಸ್ತೆಯಲ್ಲಿ ದುಷ್ಕರ್ಮಿಗಳು, ಮಂಗಳವಾರ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಐದು ಕಾರುಗಳ ಗಾಜುಗಳನ್ನು ಒಡೆದು ಹಾಕಿದ್ದಾರೆ.

ಈ ಸಂಬಂಧ ನವೀನ್‌ಕುಮಾರ್ ತೇಜಸ್ವಿ ಎಂಬುವರು ಶೇಷಾದ್ರಿಪುರ ಠಾಣೆಗೆ ದೂರು ಕೊಟ್ಟಿದ್ದಾರೆ. ರಾತ್ರಿ ಎರಡು ಗಂಟೆಯಿಂದ ನಾಲ್ಕು ಗಂಟೆಯೊಳಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

`ದುಷ್ಕರ್ಮಿಗಳು ರಸ್ತೆ ಬದಿ ನಿಂತಿದ್ದ ಟೊಯೊಟ ಫಾರ‌್ಚುನರ್, ರಿನಾಲ್ಟ್ ಡಸ್ಟರ್, ಸ್ವಿಫ್ಟ್ ಡಿಸೈರ್, ಹುಂಡಾಯ್ ಹೈ-20 ಹಾಗೂ ಕ್ವಾಂಟೊ ಕಾರುಗಳ ಗಾಜುಗಳನ್ನು ಕಲ್ಲಿನಿಂದ ಪುಡಿ ಮಾಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.