ADVERTISEMENT

ಗೃಹಿಣಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 20:06 IST
Last Updated 30 ಮಾರ್ಚ್ 2018, 20:06 IST

ಬೆಂಗಳೂರು: ಬೆಳ್ಳಂದೂರಿನ ಬೋವಿ ಕಾಲೊನಿಯಲ್ಲಿ ಗೃಹಿಣಿ ಮೋನಿಕಾ (23) ನೇಣು ಹಾಕಿಕೊಂಡು ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶದ ಅವರು, ಪ್ರವೀಣ್ ಎಂಬುವರನ್ನು ವಿವಾಹವಾಗಿದ್ದರು. ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ದಂಪತಿ ಕಾಲೊನಿಯಲ್ಲಿ ನೆಲೆಸಿದ್ದರು. ಅವರಿಗೆ ಒಂದು ವರ್ಷದ ಮಗು ಇದೆ.

ಮೋನಿಕಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಗುವಿನ ಜತೆ ಒಬ್ಬರೇ ಇದ್ದ ಅವರು ಸಂಜೆ ಫ್ಯಾನ್‌ಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸಕ್ಕೆ ಹೋಗಿದ್ದ ಪತಿ ಮನೆಗೆ ಬಂದು ನೋಡಿದಾಗ ವಿಷಯ ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.