ಬೆಂಗಳೂರು: ಗೋ ಹತ್ಯೆ ನಿಷೇಧ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕುವಂತೆ ಸೋಮವಾರ ನಡೆದ ಕರ್ನಾಟಕ ಗೋ ರಕ್ಷಣಾ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.
ಮುಖ್ಯಮಂತ್ರಿ ಸೇರಿದಂತೆ ಸಮಾರಂಭಕ್ಕೆ ಆಗಮಿಸಬೇಕಾಗಿದ್ದ ಸ್ವಾಮೀಜಿಗಳು ಹಾಗೂ ಪ್ರಮುಖ ಜನಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ದಯಾನಂದ ಸ್ವಾಮೀಜಿ ಈ ನಿರ್ಣಯ ಪ್ರಕಟಿಸಿದರು.
ಇದಕ್ಕೂ ಮುನ್ನ ಕಾರ್ಪೊರೇಷನ್ ವೃತ್ತದಿಂದ ಪುರಭವನದವರೆಗೆ ಗೋ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳ ಮೆರವಣಿಗೆ ಗಮನಸೆಳೆಯಿತು.
ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ಗೋ ರಕ್ಷಣಾ ಸಮಿತಿಯ ಅಧ್ಯಕ್ಷ ಡಿ. ಶಿವಕುಮಾರ್, ಕೋಶಾಧ್ಯಕ್ಷ ಮಾಗಡಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪ್ರಫುಲ್ಲಾ ಶ್ರೀನಿವಾಸ್, ಸಮಾಜ ಸೇವಕ ವಿಮಲ್ ಭಂಡಾರಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.