ADVERTISEMENT

ಗೌರವ ಗುಪ್ತಗೆ ಚಾಣಕ್ಯ ರಾಷ್ಟ್ರೀಯ ಸಾಧಕ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 19:30 IST
Last Updated 22 ಮಾರ್ಚ್ 2011, 19:30 IST

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಗೌರವ್ ಗುಪ್ತ ಅವರಿಗೆ 2011ನೇ ಸಾಲಿನ ‘ಚಾಣಕ್ಯ ರಾಷ್ಟ್ರೀಯ ಸಾಧಕ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಚಂಡೀಗಡದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಸಾರ್ವಜನಿಕ ಸಂಪರ್ಕ ಪರಿಷತ್ತಿನ ಜಾಗತಿಕ ಸಮಾವೇಶದಲ್ಲಿ ಪಂಜಾಬ್ ಸರ್ಕಾರದ ಶಿಕ್ಷಣ ಸಚಿವ ಸೇವಾ ಸಿಂಗ್ ಸೆಖವಾನ್ ಅವರು ಗುಪ್ತ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಗುಪ್ತ ಅವರು ಸಾರ್ವಜನಿಕ ಸೇವಾ ವಲಯಗಳಾದ ಮೂಲಸೌಕರ್ಯ, ನಗರ ಯೋಜನೆ ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT