ADVERTISEMENT

ಘರ್ಷಣೆ: 30 ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2012, 19:30 IST
Last Updated 1 ಜೂನ್ 2012, 19:30 IST

ಬೆಂಗಳೂರು: ಪ್ರಾರ್ಥನ ಮಂದಿರದ ವಿಚಾರವಾಗಿ ಮೈಸೂರು ರಸ್ತೆಯ ವಾಲ್ಮೀಕಿ ನಗರದಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು 30 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.  

 ಪ್ರಾರ್ಥನ ಮಂದಿರದ ಆಡಳಿತಾತ್ಮಕ ವಿಷಯವಾಗಿ ಹಲವು ದಿನಗಳಿಂದ ಘರ್ಷಣೆ ನಡೆಯುತ್ತಿತ್ತು. ಈ ಸಂಬಂಧ ಪೊಲೀಸರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಎರಡು ಗುಂಪುಗಳ ಸಭೆ ನಡೆಯಿತು. ಈ ವೇಳೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಘರ್ಷಣೆ ನಡೆದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಬಂದ ಪೊಲೀಸರು 30 ಜನರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದರು.
`ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶೀಘ್ರವೇ ಎರಡು ಗುಂಪುಗಳ ಶಾಂತಿ ಸಮಿತಿ ಸಭೆ ನಡೆಸಲಾಗುವುದು~ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.