ಬೆಂಗಳೂರು: `ಅಪಘಾತ ಮಾಡಿ ವಾಹನ ನಿಲ್ಲಿಸದೆ ಪರಾರಿ ಯಾಗುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾ ಗುತ್ತದೆ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿದ ಅವರು, `ಅಪಘಾ ತದ ನಂತರ ಚಾಲಕರು ವಾಹನ ನಿಲ್ಲಿಸದೆ ಪರಾರಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಸಾವುನೋವು ಪ್ರಮಾಣ ಸಹ ಹೆಚ್ಚು ತ್ತಿದೆ. ಆದ್ದರಿಂದ ಇಂತಹ ಪ್ರಕರಣ ಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ~ ಎಂದರು.
`ಚಾಲಕರು ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಸಾರ್ವಜನಿಕರ ಸಾವಿಗೆ ಕಾರಣರಾಗುತ್ತಿದ್ದಾರೆ. ಅಪಘಾತದ ನಂತರ ವಾಹನದೊಂದಿಗೆ ಪರಾರಿಯಾಗಿ ಪೊಲೀಸರಿಂದಲೂ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅಲ್ಲದೇ ಅಪಘಾತಕ್ಕೆ ಕಾರಣವಾದ ವಾಹನಗಳ ಮಾಲೀಕರು ಸಹ ಘಟನೆಯ ಬಗ್ಗೆ ಮಾಹಿತಿ ನೀಡು ತ್ತಿಲ್ಲ. ಇಂತಹ ತಪ್ಪುಗಳನ್ನು ಮಾಡುವ ಚಾಲಕರು ಹಾಗೂ ವಾಹ ನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ~ ಎಂದು ಹೇಳಿದರು.
`ಅಪಘಾತ ಸಂಭವಿಸಿದ ಸಂದರ್ಭ ದಲ್ಲಿ ಚಾಲಕರು ಅಥವಾ ವಾಹನಗಳ ಮಾಲೀಕರು ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಗಾಯಾಳು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು. ಅಪಘಾತಕ್ಕೀಡಾದ ವಾಹನವನ್ನು ರಿಪೇರಿ ಮಾಡಿಸಲು ಯಾವುದೇ ವ್ಯಕ್ತಿ ಗ್ಯಾರೇಜ್‌ಗೆ ತಂದಾಗ ಆ ಬಗ್ಗೆ ಗ್ಯಾರೇಜ್‌ಗಳ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿ ತನಿಖೆಗೆ ಸಹಕರಿಸಬೇಕು~ ಎಂದರು.
ಸೂಕ್ತ ಭದ್ರತೆ: `ಅಕ್ರಮ ಆಸ್ತಿ ಗಳಿಕೆಯ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅ.20 ರಂದು ನಗರಕ್ಕೆ ಆಗಮಿಸಲಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದರು. ನೀಡಿದರು. ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್‌ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.