ADVERTISEMENT

ಚುನಾವಣಾ ಪ್ರಣಾಳಿಕೆಯಲ್ಲಿ ತಂಬಾಕು ಬಳಕೆ ನಿಯಂತ್ರಣ ಘೋಷಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 19:59 IST
Last Updated 9 ಏಪ್ರಿಲ್ 2013, 19:59 IST

ಬೆಂಗಳೂರು: ಪ್ರತಿ ರಾಜಕೀಯ ಪಕ್ಷಗಳು ತಂಬಾಕು ಬಳಕೆಯ ನಿಯಂತ್ರಣದ ಕುರಿತು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಬೇಕು ಎಂದು ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್  (ಐಪಿಎಚ್) ಮತ್ತು ವಾಯ್ಸ ಆಫ್ ಟೊಬ್ಯಾಕೊ ವಿಕ್ಟಿಮ್ಸ ಸಂಸ್ಥೆಗಳು ಆಗ್ರಹಿಸಿವೆ.

ಪ್ರಾಣಕ್ಕೆ ಹಾನಿ ತರುವಂತಹ ತಂಬಾಕು ಬಳಕೆಯ  ನಿಯಂತ್ರಣಕ್ಕೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಕಾರ್ಯಕ್ರಮ ರೂಪಿಸಬೇಕು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಒತ್ತಾಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.