ADVERTISEMENT

ಚುನಾವಣೆ: ಜೆಡಿಎಸ್ ಸಭೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಭಾನುವಾರ ಸಂಜೆಯೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದರು.

ಶನಿವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, `ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಭಾನುವಾರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರು ಸಭೆ ನಡೆಸುವರು. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಈ ಸಭೆಯಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಾಗುವುದು~ ಎಂದರು.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ತೃತೀಯ ರಂಗ ಬಲವರ್ಧನೆ ಸಾಧ್ಯತೆ ಕುರಿತ ಪ್ರಶ್ನೆಗೆ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, `ಪ್ರಾದೇಶಿಕ ಪಕ್ಷಗಳು ಹೆಚ್ಚು ಶಕ್ತಿ ಇರುವ ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ಹಿಡಿಯಲು ಅಸಾಧ್ಯ.

ರಾಷ್ಟ್ರೀಯ ಪಕ್ಷಗಳ ಬಲ ಹೆಚ್ಚಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೂ ಇದೇ ಸ್ಥಿತಿ ಎದುರಿಸಬೇಕಾಗುತ್ತದೆ.
ಬಡವರಿಗೆ ಹೊರೆ: ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಶುಕ್ರವಾರ ಮಂಡಿಸಿರುವ 2012-13ನೇ ಸಾಲಿನ ಬಜೆಟ್ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, `ಸೇವಾ ತೆರಿಗೆ ಮತ್ತು ಅಬಕಾರಿ ತೆರಿಗೆಯನ್ನು ಹೆಚ್ಚಿಸುವ ಮೂಲಕ ಶ್ರೀಸಾಮಾನ್ಯನ ಮೇಲೆ ದೊಡ್ಡ ಹೊರೆ ಹೊರಿಸಿದೆ. ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.