ಬೆಂಗಳೂರು: ಕಳೆದ ಹತ್ತು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿರುವವರೂ ಹಸ್ತಪ್ರತಿ ಕಳುಹಿಸಬಹುದು. ತಮಗೆ ಉತ್ತಮವೆನಿಸಿದ ಸುಮಾರು ೧೦ ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿ, ನವೆಂಬರ್ 30ರೊಳಗೆ ಕಳುಹಿಸಬೇಕು.
ಆಯ್ಕೆಯಾಗುವ ಕತೆಗಾರರಿಗೆ ₨ 15,000 ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು ೨೦೧೪ರ ಏಪ್ರಿಲ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು.
ಕತೆಗಳನ್ನು ಕಳಿಸಬೇಕಾದ ವಿಳಾಸ: ಛಂದ ಪುಸ್ತಕ, c/o ವಸುಧೇಂದ್ರ, ಐ-೦೦೪, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-೫೬೦ ೦೭೬ (ಮೊ. ೯೮೪೪೪ ೨೨೭೮೨).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.