ADVERTISEMENT

ಜಮೀನು ಒತ್ತುವರಿ: ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2013, 19:59 IST
Last Updated 1 ಆಗಸ್ಟ್ 2013, 19:59 IST

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟ್ಟಡಗಳ ನಿರ್ಮಾಣ ಆಗುತ್ತಿರುವುದನ್ನು ತಡೆಯಲು ಮುಂದಡಿ ಇಟ್ಟಿರುವ ಹೈಕೋರ್ಟ್, ಈ ಸಂಬಂಧ ಸ್ಪಷ್ಟನೆ ನೀಡಲು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್, ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ, ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಲಕ್ಷ್ಮೀನಾರಾಯಣ ಇದೇ 7ರಂದು ಹಾಜರಿರಬೇಕು ಎಂದು ನಿರ್ದೇಶನ ನೀಡಿದೆ.

ಬೆಂಗಳೂರಿನ ಕವಿತಾ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್ ಅವರು, `ಬೆಂಗಳೂರು ನಗರ ಜಿಲ್ಲೆಯ ಸುತ್ತ ಸರ್ಕಾರಿ ಜಮೀನಿನಲ್ಲಿ ನಡೆಯುತ್ತಿರುವ ಒತ್ತುವರಿ, ಅಕ್ರಮ ಕಟ್ಟಡಗಳ ನಿರ್ಮಾಣ ಹಾಗೂ ಅವುಗಳ ತೆರವು ಕುರಿತು ಸ್ಪಷ್ಟನೆ ನೀಡಲು ಮೇಲೆ ಸೂಚಿಸಿದ ಸಚಿವರು, ಆಯುಕ್ತರು ನ್ಯಾಯಮೂರ್ತಿಯವರ ಕೊಠಡಿಯಲ್ಲಿ ಹಾಜರಿರಬೇಕು' ಎಂದು ಗುರುವಾರ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.