ತಲಘಟ್ಟಪುರ: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಉಪಾಧ್ಯಕ್ಷರಾಗಿ ಜೆಡಿಎಸ್‌ನ ಸರ್ವಮಂಗಳಾ ಕೃಷ್ಣಪ್ಪ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಕನಕಪುರ ರಸ್ತೆಯ ಜಿ.ಪಂ. ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಈ ಹಿಂದಿನ ಉಪಾಧ್ಯಕ್ಷೆ ಅನ್ನಪೂರ್ಣ ಕೃಷ್ಣಮೂರ್ತಿ ರಾಜೀನಾಮೆಯಿಂದ ಈ ಸ್ಥಾನ ತೆರವುಗೊಂಡಿತ್ತು.
ಉಪಾಧ್ಯಕ್ಷ ಸ್ಥಾನಕ್ಕೆ ಸರ್ವಮಂಗಳಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ನೂತನ ಉಪಾಧ್ಯಕ್ಷರನ್ನು ಶಾಸಕ ಇ.ಕೃಷ್ಣಪ್ಪ, ಜೆಡಿಎಸ್‌ನ ಯಶವಂತಪುರ ಕ್ಷೇತ್ರ ಘಟಕದ ಅಧ್ಯಕ್ಷ ಪಂಚಲಿಂಗಯ್ಯ, ಜಿ.ಪಂ. ಅಧ್ಯಕ್ಷ ಮರಿಯಪ್ಪ, ಮಾಜಿ ಉಪಾಧ್ಯಕ್ಷ ಕೆ.ಅಶೋಕನ್, ಜೆಡಿಎಸ್ ಮುಖಂಡರಾದ ಟಿ.ಎನ್. ಜವರಾಯಿಗೌಡ, ಸಿ.ವೆಂಕಟೇಶ್ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.