ADVERTISEMENT

ಜಿಲ್ಲೆಗಳಲ್ಲಿ ಪೊಲೀಸರಿಗೆ ಕಟ್ಟಡ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 19:30 IST
Last Updated 21 ಅಕ್ಟೋಬರ್ 2011, 19:30 IST

ಬೆಂಗಳೂರು: ಪೊಲೀಸ್ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಬೇರೆ ಜಿಲ್ಲೆ ಅಥವಾ ಊರುಗಳಲ್ಲಿ ಕಾರ್ಯ ನಿರ್ವಹಿಸುವಾಗ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಎಲ್ಲ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭರವಸೆ ನೀಡಿದರು.

 ನಗರದ ಮೈಸೂರು ರಸ್ತೆಯಲ್ಲಿರುವ ಹುತಾತ್ಮರ ಉದ್ಯಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಯದ ಹತ್ತು ಮಂದಿ ವಿವಿಧ ದರ್ಜೆಯ ಪೊಲೀಸ್ ಸಿಬ್ಬಂದಿ ಸೇರಿದಂತೆ ದೇಶದಲ್ಲಿ ಕಳೆದ ವರ್ಷ ಕರ್ತವ್ಯ ನಿರ್ವಹಣೆ ವೇಳೆ ಸಾವನ್ನಪ್ಪಿದ ಒಟ್ಟು 636 ಮಂದಿಗೆ ಗೌರವ ಸಲ್ಲಿಸಲಾಯಿತು.

ಗೃಹ ಸಚಿವ ಆರ್.ಅಶೋಕ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮ್‌ದಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎನ್.ಅಚ್ಯುತರಾವ್, ಸಿಐಡಿ ಡಿಜಿಪಿ ಶಂಕರ ಬಿದರಿ, ಅಗ್ನಿಶಾಮಕ ಇಲಾಖೆ ಡಿಜಿಪಿ ಎ.ಆರ್.ಇನ್ಫೆಂಟ್, ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ ಕುಚ್ಚಣ್ಣ ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.