ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಲು ಪ್ರದೇಶ ಮಹಿಳಾ ಕಾಂಗ್ರೆಸ್ ನಿರ್ಧರಿಸಿದೆ.
ಅಲ್ಲದೆ, ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಶಾಸಕರಾದ ಸಿ.ಸಿ. ಪಾಟೀಲ ಹಾಗೂ ಕೃಷ್ಣ ಪಾಲೆಮಾರ್ ಅವರನ್ನು ದೋಷಮುಕ್ತಗೊಳಿಸಿ, ಲಕ್ಷ್ಮಣ ಸವದಿ ಅವರಿಗೆ ಎಚ್ಚರಿಕೆ ನೀಡಬೇಕು ಎಂದು ಶಿಫಾರಸು ಮಾಡಿರುವ ಸದನ ಸಮಿತಿ ವರದಿಯನ್ನು ಮಹಿಳಾ ಕಾಂಗ್ರೆಸ್ ಖಂಡಿಸಿದೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು, `ಮಹಿಳಾ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಅನಿತಾ ವರ್ಮ ಅವರ ನೇತೃತ್ವದಲ್ಲಿ ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲು ಗುರುವಾರ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಲಾಗಿದೆ~ ಎಂದು ತಿಳಿಸಿದರು.
ರಾಜ್ಯ ವಿಧಾನಸಭೆಗೆ ನವೆಂಬರ್‌ನಲ್ಲೇ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸಲಾಗುವುದು. ಕೇಂದ್ರದ ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಹೇಶ್ವರಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.