ಪೀಣ್ಯ ದಾಸರಹಳ್ಳಿ: ಬಿಜೆಪಿಯು ಭ್ರಷ್ಟಾಚಾರ ಹಾಗೂ ಪಕ್ಷಾಂತರಿಗಳಿಂದ ದಿನೇ ದಿನೇ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಜೆಡಿಎಸ್‌ಗೆ ಜನ ಬೆಂಬಲ ವ್ಯಕ್ತವಾಗುತ್ತಿದೆ. ಇದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ದಾಸರಹಳ್ಳಿ ಕ್ಷೇತ್ರದ ಹೆಸರಘಟ್ಟ ಮುಖ್ಯ ರಸ್ತೆಯ ಸಿಡೇದಹಳ್ಳಿಯ ಎನ್‌ಎಂಎಚ್ ಸಭಾಂಗಣದಲ್ಲಿ ಜೆಡಿಎಸ್ ನಗರ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತದಾರರ ಮನೆ- ಮನೆಗಳಿಗೆ ತೆರಳಿ ಪಕ್ಷವನ್ನು ಸಂಘಟಿಸಲು ಮುಂದಾಗಬೇಕು~ ಎಂದು ಅವರು ಸಲಹೆ ನೀಡಿದರು.
ಬಿಬಿಎಂಪಿ ಸದಸ್ಯ ಮುನಿಸ್ವಾಮಿ, ಜೆಡಿಎಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಗಡೆ, ರಾಜ್ಯ ಯುವ ಪ್ರಧಾನ ಕಾಯದರ್ಶಿ ಚಂದ್ರಶೇಖರ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಭೈರಪ್ಪ, ಮುಖಂಡರಾದ ಸೌಂದರ್ಯ ರಮೇಶ್, ಸಿದ್ಧರಾಜು ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.