ADVERTISEMENT

ಜೆಡಿಎಸ್‌ ಶಾಸಕರ ಅನರ್ಹತೆ: ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 18 ಮೇ 2018, 19:02 IST
Last Updated 18 ಮೇ 2018, 19:02 IST

ಬೆಂಗಳೂರು: 14ನೇ ವಿಧಾನಸಭೆ ಅವಧಿಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿದ ಜೆಡಿಎಸ್‌ನ ಏಳು ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸಲ್ಲಿಸಿದ ಅರ್ಜಿಯನ್ನು ವಿಧಾನಸಭೆಯ ನಿರ್ಗಮಿತ ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರು ಶುಕ್ರವಾರ ವಜಾಗೊಳಿಸಿದ್ದಾರೆ.

ರಾಜ್ಯಸಭೆಗೆ 2016ರ ಜೂನ್‌11ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿದ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಆಗ ಶಾಸಕರಾದ ಮೂಡಿಗೆರೆಯ ಬಿ.ಬಿ. ನಿಂಗಯ್ಯ ಹಾಗೂ ಶ್ರವಣಬೆಳಗೊಳದ ಸಿ.ಎನ್‌. ಬಾಲಕೃಷ್ಣ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

‘ವಿಧಾನಸಭೆ ಅವಧಿ ಮುಗಿದಿದೆ ಎಂದು ರಾಜ್ಯಪಾಲರು ಇದೇ 17ರಂದು ಅಧಿಸೂಚನೆ ಹೊರಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ತೀರ್ಪು ಪ್ರಕಟಿಸುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.