ADVERTISEMENT

ಜೈಲಿನಲ್ಲಿ ಮೊಬೈಲ್ ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2016, 19:39 IST
Last Updated 7 ಫೆಬ್ರುವರಿ 2016, 19:39 IST

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಅಧಿಕಾರಿಗಳು ನಡೆಸಿದ ಭದ್ರತಾ ತಪಾಸಣೆ ವೇಳೆ, ವಿಶೇಷ ಭದ್ರತೆ ಹೊಂದಿರುವ ಕೊಠಡಿಗಳ ಸಮೀಪ ಮೊಬೈಲ್ ಪತ್ತೆಯಾಗಿದೆ.

ಎಂದಿನಂತೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ಜೈಲಿನ ಎಲ್ಲಾ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿತ್ತು.

ಆಗ ಭಯೋತ್ಪಾದನೆ ಸೇರಿದಂತೆ, ಪ್ರಮುಖ ಪ್ರಕರಣಗಳಲ್ಲಿ ಬಂಧಿತರಾಗಿರುವವರು ಇರುವ ಕೊಠಡಿಗಳ ಹೊರಭಾಗ ಈ ಬೇಸಿಕ್ ಮೊಬೈಲ್ ಹ್ಯಾಂಡ್‌ಸೆಟ್ ಸಿಕ್ಕಿದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಠಾಣೆಗೆ ದೂರು ಕೊಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.

ಮೊಬೈಲ್‌ನಲ್ಲಿ ಅತ್ಯಂತ ಕಡಿಮೆ ದತ್ತಾಂಶವಿದ್ದು, ಕರೆಯ ವಿವರವನ್ನು ಪರಿಶೀಲಿಸಲಾಗುತ್ತಿದೆ. ಜೈಲಿನೊಳಗೆ ಮೊಬೈಲ್ ಜಾಮರ್ ಅಳವಡಿಸಲಾಗಿದ್ದರೂ ಇದನ್ನು ಯಾರು ಬಳಸುತ್ತಿದ್ದರು? ಹೇಗೆ ಜೈಲಿನೊಳಗೆ ಬಂತು? ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸರು ತಿಳಿಸಿದರು.

ಅಲ್ಲದೆ, ಬ್ಯಾರಕ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.