ADVERTISEMENT

ಜೋಡಿ ಕೊಲೆ; ದಂಡುಪಾಳ್ಯ ಗ್ಯಾಂಗ್‌ ಹೇಳಿಕೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 20:04 IST
Last Updated 8 ಮಾರ್ಚ್ 2018, 20:04 IST

ಬೆಂಗಳೂರು: ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯಲ್ಲಿ 21 ವರ್ಷಗಳ ಹಿಂದೆ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯ, ಆರೋಪಿಗಳಾದ ದಂಡುಪಾಳ್ಯ ಗ್ಯಾಂಗ್‌ನ ನಾಲ್ವರ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿತು.

ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸ್ಥಾಪಿಸಲಾಗಿರುವ ನ್ಯಾಯಾಲಯಕ್ಕೆ ಗ್ಯಾಂಗ್‌ನ ದೊಡ್ಡಹನುಮ, ವೆಂಕಟರಾಮ, ಕೃಷ್ಣ, ಚಿಕ್ಕಹನುಮ ಹಾಗೂ ಮುನಿಕೃಷ್ಣ ಹೇಳಿಕೆ ನೀಡಿದರು. ಅದನ್ನು ಆಲಿಸಿದ ನ್ಯಾಯಾಲಯ, ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು. ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಎಸ್‌.ಪಾಟೀಲ ಹಾಜರಿದ್ದರು.

ಬೋಳೂರಿನಲ್ಲಿ ವಾಸವಿದ್ದ ಲೂಯಿಸ್‌ ಹಾಗೂ ರಂಜಿತ್‌ ಎಂಬುವರ ಮನೆಗೆ 1997ರ ಅಕ್ಟೋಬರ್ 11ರಂದು ನುಗ್ಗಿದ್ದ ಆರೋಪಿಗಳು, ಚಾಕುವಿನಿಂದ ಇರಿದು ಅವರಿಬ್ಬರನ್ನು ಕೊಲೆ ಮಾಡಿದ್ದರು. ನಂತರ ಚಿನ್ನಾಭರಣವನ್ನು ಕದ್ದೊಯ್ದಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಉರ್ವ ಪೊಲೀಸರು, ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ಜಪ್ತಿ ಮಾಡಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮರು ವಿಚಾರಣೆ ನಡೆಸುವಂತೆ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.