ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಗೆ ಪ್ರತ್ಯೇಕ ಟೌನ್‌ಶಿಪ್ ಸ್ಥಾನ ನೀಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಬಿಎಂಪಿ ಸದಸ್ಯರೂ ಸೇರಿದಂತೆ ಕೆಲವರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಸುಮಾರು 903 ಎಕರೆ ಪ್ರದೇಶದಲ್ಲಿ ವಿಸ್ತಾರವಾಗಿರುವ ಈ ಪ್ರದೇಶಕ್ಕೆ ಬಿಬಿಎಂಪಿ, ಬಿಡಿಎ ಮತ್ತು ಜಲ ಮಂಡಳಿ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಿವೆ. ವಾರ್ಷಿಕ 300 ಕೋಟಿಯಷ್ಟು ತೆರಿಗೆ ಸಂಗ್ರಹಿಸಲು ಅಲ್ಲಿ ಅವಕಾಶ ಇದೆ. ಇಂತಹ ಪ್ರದೇಶವನ್ನು ಬಿಬಿಎಂಪಿ ಸುಪರ್ದಿಗೆ ನೀಡದೆ, ಅದಕ್ಕೆ ಪ್ರತ್ಯೇಕ ಟೌನ್‌ಶಿಪ್ ಮಾನ್ಯತೆ ನೀಡಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಈ ಹಿಂದೆ ಹಲವು ಬಾರಿ ನಿರ್ಣಯ ಕೈಗೊಂಡು, ಆ ಪ್ರದೇಶವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿಕೊಳ್ಳಲಾ ಗಿದ್ದರೂ ಸರ್ಕಾರ ಮಾನ್ಯ ಮಾಡಿಲ್ಲ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ತೆರಿಗೆಯಿಂದ ತಪ್ಪಿಸಿ ಕೊಳ್ಳುವ ಉದ್ದೇಶದಿಂದ ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಸಂಸ್ಥೆ (ಎಲಿಸಿಯಾ) ನಗರಾಭಿವೃದ್ಧಿ ಇಲಾಖೆಗೆ ತಪ್ಪು ಮಾಹಿತಿ ನೀಡಿ ಟೌನ್‌ಶಿಪ್ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿ ರುವ ಬಿಬಿಎಂಪಿ ಸದಸ್ಯ ಎನ್.ಆರ್. ರಮೇಶ್ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.