ADVERTISEMENT

ಡಿಕೆಶಿ ಆಪ್ತನ ಮನೆ ಮೇಲೆ ಐ.ಟಿ ದಾಳಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 19:48 IST
Last Updated 21 ಅಕ್ಟೋಬರ್ 2017, 19:48 IST

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಲೆಕ್ಕಪರಿಶೋಧಕ ಸೋಮೇಶ್ ಅವರ ಸದಾಶಿವ ನಗರ ಮನೆ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಮಧ್ಯಾಹ್ನದ ತನಕ ಐ.ಟಿ ಅಧಿಕಾರಿಗಳು ತಪಾಸಣೆ ನಡೆಸಿದರು. ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿದ್ದ ದಾಳಿಯ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಐ.ಟಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT