ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಬೆಂಬಲಿಗರು ವರದಿಗಾರರ ಮೇಲೆ ಹಲ್ಲೆ ನಡೆಸಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ನಗರದ ಶೇಷಾದ್ರಿ ರಸ್ತೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕುಟುಕು ಕಾರ್ಯಾಚರಣೆಗೆಂದು ಡಿಕೆಶಿ ಅವರ ಮನೆಗೆ ಹೋಗಿದ್ದ ವರದಿಗಾರರ ಮೇಲೆ ಸಚಿವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಇದರಿಂದ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶ ಮಾಡಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
‘ಸಚಿವರು ವರದಿಗಾರರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಪೊಲೀಸರು ಒತ್ತಡಕ್ಕೆ ಮಣಿದು ವರದಿಗಾರರನ್ನು ಬಂಧಿಸಿದ್ದಾರೆ. ಕೂಡಲೇ ಅವರ ಬಿಡುಗಡೆಯಾಗಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.