ADVERTISEMENT

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂದು ಸಿಇಟಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2012, 19:30 IST
Last Updated 18 ಆಗಸ್ಟ್ 2012, 19:30 IST

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಮೂರನೇ ಸೆಮಿಸ್ಟರ್‌ನ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಭಾನುವಾರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ.

ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ರಾಜ್ಯದ ವಿವಿಧೆಡೆಯ 48 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 22,555 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇವರಲ್ಲಿ 6,855 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.