
ಪ್ರಜಾವಾಣಿ ವಾರ್ತೆಬೆಂಗಳೂರು: ಡೆಂಗೆ ಜ್ವರದಿಂದ ನಗರದಲ್ಲಿ ಮತ್ತೊಬ್ಬ ಯುವಕ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.
ರಾಮಮೂರ್ತಿನಗರ ವ್ಯಾಪ್ತಿಯ ವಿಜಿನಾಪುರದ ಇರ್ಷಾದ್ (24) ಎಂಬುವರೇ ಸಾವನ್ನಪ್ಪಿರುವ ಯುವಕ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಇರ್ಷಾದ್‌ನನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇರ್ಷಾದ್ ಸಾವನ್ನಪ್ಪಿದ್ದಾನೆ .
ವರದಿ ಬಂದ ನಂತರ ದೃಢ
ಈ ನಡುವೆ, ಬೌರಿಂಗ್ ಆಸ್ಪತ್ರೆಯಿಂದ ವರದಿ ಬಂದ ನಂತರವಷ್ಟೇ ಇರ್ಷಾದ್ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಬಿಬಿಎಂಪಿಯ ಮಹದೇವಪುರ ವಲಯದ ಮುಖ್ಯ ಆರೋಗ್ಯಾಧಿಕಾರಿ ಡಾ. ಬಿರಾದಾರ್ `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.