ADVERTISEMENT

‘ತಾಯ್ನೆಲದ ಪ್ರೀತಿಯಿಂದಾಗಿ ಅಮೆರಿಕದಿಂದ ಮರಳಿದೆ’

​ಪ್ರಜಾವಾಣಿ ವಾರ್ತೆ
Published 28 ಮೇ 2018, 19:34 IST
Last Updated 28 ಮೇ 2018, 19:34 IST

ಬೆಂಗಳೂರು: ‘ಹೈಸ್ಕೂಲ್‌ನಲ್ಲಿ ಓದುತ್ತಿದ್ದಾಗ ಕನ್ನಡ ಸಾಹಿತ್ಯದ ಬಗ್ಗೆ ಅಭಿಮಾನ ಮೂಡಿತು. ಅದು ಮುಂದೆ ಸಾಹಿತ್ಯದ ಕೃಷಿಗೆ ಪ್ರೇರಣೆಯಾಯಿತು‘ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞ ಡಾ. ಕೆ. ಚಿದಾನಂದ ಗೌಡ ಅಭಿಪ್ರಾಯಪಟ್ಟರು.

ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದ ’ಸಾಧಕರೊಡನೆ ಸಂವಾದ’ದಲ್ಲಿ ಮಾತನಾಡಿದ ಅವರು ‘ತಂದೆಗೆ ಸಾಹಿತ್ಯದಲ್ಲಿ ತುಂಬಾ ಆಸಕ್ತಿ ಇತ್ತು. ಅವರು ತಂದಿದ್ದ ಕಿಟೆಲ್‌ ಶಬ್ದಕೋಶವನ್ನು ಓದುತ್ತಿದ್ದೆ. ಅದರಿಂದ ಕನ್ನಡದಲ್ಲಿ ಜ್ಞಾನ ಬೆಳೆಯಿತು’ ಎಂದರು.

‘ಕನ್ನಡ ಸಾಹಿತ್ಯದಲ್ಲಿ ಅಪಾರ ಆಸಕ್ತಿ ಇದ್ದಿದ್ದರಿಂದ ಬಿ.ಎ ಮಾಡಲು ಮೈಸೂರಿನ ಮಹಾರಾಜಾ ಕಾಲೇಜಿಗೆ ಅರ್ಜಿ ಸಲ್ಲಿಸಿದ್ದೆ. ಭೌತಶಾಸ್ತ್ರ, ಗಣಿತ, ರಸಾಯನ ಶಾಸ್ತ್ರದಲ್ಲಿ ಉತ್ತಮ ಅಂಕಗಳು ಇದ್ದಿದ್ದರಿಂದ ಬಿ.ಇ ಮಾಡಲು ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜಿಗೂ ಅರ್ಜಿ ಸಲ್ಲಿಸಿದೆ. ಆದರೆ, ಅದೃಷ್ಟ ಎಂಜಿನಿಯರಿಂಗ್‌ನತ್ತ ಒಲಿಯಿತು’ ಎಂದು ಹೇಳಿದರು.

ADVERTISEMENT

‘ನಾಸಾದಲ್ಲಿ ಎರಡು ವರ್ಷಗಳ ಕಾಲ ಸಂಶೋಧನೆ ನಡೆಸಿದೆ. ಸಂಶೋಧನೆ ಪೂರ್ಣಗೊಂಡ ಬಳಿಕ ಅಲ್ಲಿಯ ಖಾಸಗಿ ಕಂಪನಿಗಳು ಕೆಲಸಕ್ಕೆ ನನ್ನನ್ನು ಆಹ್ವಾನಿಸಿದ್ದವು. ಅಲ್ಲಿಯೇ ನೆಲೆಸುವ ಅವಕಾಶವೂ ಸಾಕಷ್ಟಿತ್ತು. ಆದರೆ, ತಾಯ್ನಾಡಿನ ಪ್ರೀತಿ ಪುನಃ ಇಲ್ಲಿಗೆ ಕರೆತಂದಿತು‘ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮನು ಬಳಿಗಾರ್‌ ಪ್ರಾಸ್ತಾವಿಕ ಮಾತನಾಡಿ, ಕನ್ನಡ ತಂತ್ರಾಂಶ ಅಭಿವೃದ್ಧಿಗೆ ಚಿದಾನಂದ ಗೌಡ ಅಪಾರ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.