ADVERTISEMENT

ತಾ. ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 19:30 IST
Last Updated 10 ಡಿಸೆಂಬರ್ 2013, 19:30 IST

ರಾಜರಾಜೇಶ್ವರಿನಗರ: ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾದ ಎಲ್ಲಮ್ಮ ನಾರಾಯ ಣಸ್ವಾಮಿ ಅವರ ವಿರುದ್ದ 10ಜನ ಚುನಾಯಿತ ಜನಪ್ರತಿನಿಧಿಗಳು ತುರ್ತು ಸಭೆ ಸೇರಿ ಅವಿಶ್ವಾಸ ಗೊತ್ತುವಳಿ ಮಂಡಿಸಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯ್ತಿಯಲ್ಲಿ 12ಜನ ಸದಸ್ಯ ರಿದ್ದು 10ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಒಪ್ಪಿಗೆ ಸೂಚಿಸಿ ಸಹಿ ಹಾಕಿದರು.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು 10ತಿಂಗಳ ಅವಧಿಗೆ ಎಲ್ಲಮ್ಮನಾರಾಯಣಸ್ವಾಮಿ ಮತ್ತೆ 10ತಿಂಗಳು ಚಾಮರಾಜ ಅವರು ಕಾರ್ಯನಿರ್ವಹಿಸಬೇಕಾಗಿತ್ತು.

ಬೆಂಗಳೂರು ನಗರಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಆಗಿರುವ ಶಾಸಕ ಎಸ್‌.ಟಿ. ಸೋಮಶೇಖರ್‌ ಅಧ್ಯಕ್ಷ ತೆಯಲ್ಲಿ ಸಭೆ ಸೇರಿ ನಿರ್ಣಯ ಕೈಗೊಳ್ಳ ಲಾಯಿತು. ಅವಧಿ ಮುಗಿದಿದ್ದರೂ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೇ ನಿಯಮಗಳನ್ನು ಮುರಿಯ ಲಾಗಿದೆ. ಹಾಗಾಗಿ ಅವಿಶ್ವಾಸ ಮಂಡನೆ ಮಾಡಬೇಕಾಯಿತು ಎಂದು ಸದಸ್ಯರೊಬ್ಬರು ತಿಳಿಸಿದರು.

ಅವಿಶ್ವಾಸ ನಿರ್ಣಯದ ಪ್ರತಿ ಯನ್ನು ಬೆಂಗಳೂರು ನಗರ ಜಿಲ್ಲಾ ಧಿಕಾರಿ, ಉಪವಿ ಭಾಗಾಧಿಕಾರಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿ ರ್ವಾಹಣಾಧಿಕಾರಿಗೆ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.