ADVERTISEMENT

ತುಂಡಾದ ವಿದ್ಯುತ್ ತಂತಿ: 9 ದ್ವಿಚಕ್ರ ವಾಹನಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಆನೇಕಲ್: ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಿಂಟೆಕ್ಸ್ ಕಾರ್ಖಾನೆ ಮುಂಭಾಗದ ರಸ್ತೆಯಲ್ಲಿ ಹಾದುಹೋಗಿರುವ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಯೊಂದು ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಮೇಲೆ ತುಂಡಾಗಿ ಬಿದ್ದ ಪರಿಣಾಮ 9 ದ್ವಿಚಕ್ರ ವಾಹನಗಳು ಸುಟ್ಟು ಹೋಗಿರುವ ಘಟನೆ ಸೋಮವಾರ ನಡೆದಿದೆ.

ಹಲವು ದಿನಗಳಿಂದ ಈ ತಂತಿಯಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಳ್ಳುತ್ತಿದ್ದವು ಎನ್ನಲಾಗಿದೆ. ವಿದ್ಯುತ್ ತಂತಿ ಕಡಿದು ಬಿದ್ದುದರಿಂದ ವಾಹನಗಳಲ್ಲಿನ ಪೆಟ್ರೋಲ್ ಸಂಪರ್ಕದಿಂದಾಗಿ ಬೆಂಕಿ ಹೊತ್ತಿಕೊಂಡು ವಾಹನಗಳು ಸುಟ್ಟು ಹೋಗಿವೆ.

ಹೆಬ್ಬಗೋಡಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.