ADVERTISEMENT

ತುಂಬಿ ತುಳುಕಿದ ‘ನಮ್ಮ ಮೆಟ್ರೊ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2017, 19:30 IST
Last Updated 18 ಜೂನ್ 2017, 19:30 IST
ತುಂಬಿ ತುಳುಕಿದ ‘ನಮ್ಮ ಮೆಟ್ರೊ’
ತುಂಬಿ ತುಳುಕಿದ ‘ನಮ್ಮ ಮೆಟ್ರೊ’   

ಬೆಂಗಳೂರು: ‘ನಮ್ಮ ಮೆಟ್ರೊ’ ಯೋಜನೆಯ ಮೊದಲ ಹಂತದ ಎಲ್ಲ ಮಾರ್ಗಗಳಲ್ಲಿ ಭಾನುವಾರರಿಂದ ಪೂರ್ಣ ಪ್ರಮಾಣದ ಸಂಚಾರ ಆರಂಭವಾಯಿತು. ಮೊದಲ ದಿನವೇ ಉತ್ತರ–ದಕ್ಷಿಣ ಕಾರಿಡಾರ್‌ನ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕಿದವು.

‘ಸಂಜೆ 4 ಗಂಟೆಯಿಂದ ರಾತ್ರಿ 9.30ರ ನಡುವೆ ಉತ್ತರ–ದಕ್ಷಿಣ ಹಾಗೂ ಪೂರ್ವ ಪಶ್ಚಿಮ ಕಾರಿಡಾರ್‌ಗಳಲ್ಲಿ ಒಟ್ಟು 1 ಲಕ್ಷಕ್ಕೂ ಅಧಿಕ ಮಂದಿ ಪ್ರಯಾಣಿಸಿದ್ದಾರೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌)  ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ರಾವ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಳೆದ ಭಾನುವಾರಕ್ಕೆ ಹೋಲಿಸಿದರೆ  ಪ್ರಯಾಣಿಕರ ಸಂಖ್ಯೆ ದ್ವಿಗುಣವಾಗಿದೆ’  ಎಂದು ಕೆಂಪೇಗೌಡ ರೈಲ್ವೆ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಗಳಿಕೆ ₹ 1 ಕೋಟಿ ದಾಟುವ ನಿರೀಕ್ಷೆ:

‘ಮೊದಲ ಹಂತ ಪೂರ್ಣಗೊಂಡ ಬಳಿಕ ನಿತ್ಯ ಸರಾಸರಿ 5 ಲಕ್ಷ ಮಂದಿ ಪ್ರಯಾಣಿಸುತ್ತಾರೆ ಎಂಬ ನಿರೀಕ್ಷೆ ಇಟ್ಟಿಕೊಂಡಿದ್ದೇವೆ. ಇದುವರೆಗೆ ಟಿಕೆಟ್‌ ಮಾರಾಟದ ಮೂಲಕ ನಮ್ಮ ದೈನಂದಿನ ಸರಾಸರಿ ಆದಾಯ ₹ 35 ಲಕ್ಷ ಇತ್ತು. ಇದು ಇನ್ನು ಕೆಲವೇ ದಿನಗಳಲ್ಲಿ ₹1 ಕೋಟಿ ದಾಟಬಹುದು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಸಿಂಗ್‌ ಖರೋಲ ಆಶಾವಾದ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.