ADVERTISEMENT

ದಂಡು ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 19:30 IST
Last Updated 5 ನವೆಂಬರ್ 2012, 19:30 IST

ಯಲಹಂಕ: `ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ದಂಡು ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು~ ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ನಗರದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ತಿಮ್ಮೇಶ್ ತಿಳಿಸಿದರು.

ಎಚ್‌ಬಿಆರ್ ಬಡಾವಣೆಯ ಬಿಡಿಎ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ ಘಟಕದ 2012-2015ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 

`ದಂಡು ಪ್ರದೇಶದಲ್ಲಿ ಕನ್ನಡೇತರರು ಹೆಚ್ಚಾಗಿರುವುದರಿಂದ ಅವರಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸಮ್ಮೇಳನ ನಡೆಸಲು ತೀರ್ಮಾನಿ ಸಲಾಗಿದೆ. ದಂಡುಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಹಾಗೂ ಸ್ಥಳೀಯ ಕನ್ನಡಪರ ಸಂಘಟನೆಗಳ ಸಹಕಾರದಲ್ಲಿ ಈ ಸಮ್ಮೇಳನವನ್ನು ನಡೆಸಲಾಗುವುದು~ ಎಂದು ಅವರು ತಿಳಿಸಿದರು.

ಶಾಸಕ ಕೆ.ಜೆ.ಜಾರ್ಜ್ ಮಾತನಾಡಿ, `ಸರ್ವಜ್ಞನಗರ ಕ್ಷೇತ್ರದಲ್ಲಿ ಸರ್ವಜ್ಞನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸುಸಜ್ಜಿತ ಕನ್ನಡ ಭವನ, ಸರ್ಕಾರಿ ಆಸ್ಪತ್ರೆ ಹಾಗೂ ಬಿಡಿಎ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸಲು ಅನುಮತಿಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಅನು ಮತಿ ದೊರೆತ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು~ ಎಂದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.