ADVERTISEMENT

ದಲಿತರಿಗೆ ಬಹಿಷ್ಕಾರ:ಧರಣಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2011, 19:30 IST
Last Updated 11 ಏಪ್ರಿಲ್ 2011, 19:30 IST
ದಲಿತರಿಗೆ ಬಹಿಷ್ಕಾರ:ಧರಣಿ
ದಲಿತರಿಗೆ ಬಹಿಷ್ಕಾರ:ಧರಣಿ   

ದೊಡ್ಡಬಳ್ಳಾಪುರ: ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕು ಕೆರೆಗೋಡು ಗ್ರಾಮದಲ್ಲಿ ಕುಲಕಸುಬು ಮಾಡಲು ನಿರಾಕರಿಸಿದ ದಲಿತರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿ ಸರ್ಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿ ಸಮಿತಿ ಮುಖಂಡರು, ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿರುವದಕ್ಕೆ  ಕೆರೆಗೋಡು ಗ್ರಾಮದಲ್ಲಿ  ದಲಿತರಿಗೆ ಬಹಿಷ್ಕಾರ ಹಾಕಿರುವ ಘಟನೆ ಸಾಕ್ಷಿಯಾಗಿದೆ. ಈ ಗ್ರಾಮದಲ್ಲಿರುವ 9 ದಲಿತ ಕುಟುಂಬಗಳೆಗೆ ಮೇಲ್ವರ್ಗದವರು  ಕಿರುಕುಳ ನೀಡುತ್ತಿದ್ದಾರೆ. ದಲಿತರು ಮಲ ಹೊರುವುದು, ಸತ್ತ ಪ್ರಾಣಿಗಳನ್ನು ಎತ್ತುವುದು, ತಮಟೆ ಹೊಡೆಯುವುದು ಮುಂತಾದ ಕೆಲಸಗಳನ್ನು ಮಾಡಲು ನಿರಾಕರಿಸಿದ್ದಕ್ಕಾಗಿ ಇಲ್ಲಿ ಬಹಿಷ್ಕಾರ ಹಾಕಲಾಗಿದೆ.

ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ದಲಿತರನ್ನು ಕೀಳಾಗಿ ಕಾಣುತ್ತಿರುವ ಜನರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ತಾಲ್ಲೂಕು ಅಧ್ಯಕ್ಷ ಶಿವಣ್ಣ, ನಗರಾಧ್ಯಕ್ಷ ಸುಬ್ರಮಣಿ, ಕರ್ನಾಟಕ ರಕ್ಷಣಾ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಆರ್.ಅಶ್ವತ್ಥ್ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.