ADVERTISEMENT

‘ದಲಿತರು ಮತ ಬ್ಯಾಂಕ್‌ ಅಲ್ಲ’

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 19:30 IST
Last Updated 26 ಏಪ್ರಿಲ್ 2018, 19:30 IST

ಬೆಂಗಳೂರು: ‘ದಲಿತರನ್ನು ವೋಟ್‌ ಬ್ಯಾಂಕ್‌ ಆಗಿ ಪರಿಗಣಿಸುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಭಿವೃದ್ಧಿಯ ವಿಷಯದಲ್ಲಿ ವಿಫಲವಾಗಿವೆ’ ಎಂದು ಬಹುಜನ ಸಮಾಜ ಪರಿಷತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬುದ್ಧಾನಂದ ಸ್ವಾಮೀಜಿ ಹೇಳಿದರು.

‘ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಹೇಳಿ ದಲಿತರ ಮತ ಕೇಳುವ ಕಾಂಗ್ರೆಸ್‌ ಪಕ್ಷ ಇದುವರೆಗೂ ಮಾತು ಉಳಿಸಿಕೊಂಡಿಲ್ಲ. ಮತ್ತೆ ಆಮಿಷ ಒಡ್ಡಿ ದಲಿತರ ಮತ ಕೇಳಲು ಬಂದಿದ್ದಾರೆ. ಶ್ರೀಮಂತರು ಶ್ರೀಮಂತರಾಗಿ, ಬಡವರು ಬಡವರಾಗಿಯೇ ಉಳಿಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಕೂಡ ಹಿಂದುಳಿದ ವರ್ಗಗಳ ಪರವಾಗಿ ನಿಂತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹೀಗಾಗಿ ಮುಂದಿನ ವರ್ಷದವರೆಗೆ ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಜಾಗೃತಿ ಅಭಿಯಾನ ಕೈಗೊಂಡಿದ್ದೇನೆ. ಜನರು ಸ್ವಂತ ವಿವೇಚನೆಯಿಂದ ಅಭಿವೃದ್ಧಿ ಚಿಂತನೆ ಇರುವವರ ಪರವಾಗಿ ನಿಲ್ಲಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.