ಬೆಂಗಳೂರು: ಸಿಇಟಿ ಬರೆದಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಕಾರ್ಯಕ್ಕೆ ಶುಕ್ರವಾರ ಚಾಲನೆ ಸಿಕ್ಕಿದ್ದು, ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿ ಸೇರಿದಂತೆ ರಾಜ್ಯದ 13 ಸಹಾಯ ಕೇಂದ್ರಗಳಲ್ಲಿ 1,650 ಅಭ್ಯರ್ಥಿಗಳು ಪರಿಶೀಲನೆಗೆ ಹಾಜರಾಗಿದ್ದಾರೆ.
ಒಟ್ಟು 1,783 ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿ ಕೊಂಡಿದ್ದರು. ಒಂದರಿಂದ 700 ರ್‍್ಯಾಂಕ್‌ವರೆಗಿನ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಯಿತು. ಜೂನ್ 20ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ.
ಶನಿವಾರ, 701 ರಿಂದ 4 ಸಾವಿರವರೆಗೆ ರ್‍್ಯಾಂಕ್ ಪಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಅಂಕಿ ಅಂಶ
1,783 ನೋಂದಣಿ ಮಾಡಿರುವ ಅಭ್ಯರ್ಥಿಗಳು
1,650 ಪರಿಶೀಲನೆಗೆ ಹಾಜರಾದವರ ಸಂಖ್ಯೆ
700 ರ್‍ಯಾಂಕ್ ವರೆಗಿನ ವಿದ್ಯಾರ್ಥಿಗಳ ಪರಿಶೀಲನೆ ಪೂರ್ಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.