ಬೆಂಗಳೂರು: ಮಹಾಲಕ್ಷ್ಮಿಲೇಔಟ್‌ನ ಗಣೇಶ ಬ್ಲಾಕ್‌ನಲ್ಲಿರುವ ಗಣಪತಿ ದೇವಸ್ಥಾನದ ಜಾಗವನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ನೂರಾರು ಜನರು ದೇವಸ್ಥಾನದ ಬಳಿ ಸೋಮವಾರ ಜಮಾಯಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ನಂದಿನಿಲೇಔಟ್ ಪೊಲೀಸರು ಜನರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಗಣೇಶ ಬ್ಲಾಕ್‌ನ ನಾಲ್ಕನೇ ತಿರುವಿನಲ್ಲಿ ಗಣಪತಿ ದೇವಸ್ಥಾನವಿದೆ. ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಜಾಗವನ್ನು ಖರೀದಿಸಿರುವ ವ್ಯಕ್ತಿಯೊಬ್ಬರು ಆ ಸ್ಥಳವನ್ನು ಸ್ವಚ್ಛಗೊಳಿಸುತ್ತಿದ್ದರು. ಇದನ್ನು ನೋಡಿದ ಜನರು ದೇವಸ್ಥಾನದ ಜಾಗವನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳದಲ್ಲಿ ಜಮಾಯಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ದೇವಸ್ಥಾನದ ಪಕ್ಕದ ಜಾಗ ಯಾರದ್ದು, ಅದನ್ನು ಯಾರು ಖರೀದಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ನಂದಿನಿಲೇಔಟ್ ಠಾಣೆ ಎಸ್‌ಐ ಕೆಂಪರಾಜು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.