
ಪ್ರಜಾವಾಣಿ ವಾರ್ತೆವೈಟ್ಫೀಲ್ಡ್: ಇಲ್ಲಿಗೆ ಸಮೀಪದ ಸರ್ಜಾಪುರ ರಸ್ತೆಯ ದೊಮ್ಮಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇಬ್ಬರಿಗೆ ಡೆಂಗೆ ಜ್ವರ ಇರುವುದು ಪತ್ತೆಯಾಗಿದೆ.
`ದೊಮ್ಮಸಂದ್ರ ಗ್ರಾಮದ ವಾಣಿ ಎಂಬವರು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಕೊಮ್ಮಸಂದ್ರ ಗ್ರಾಮದ ಶ್ರಾವ್ಯ ಎಂಬುವರು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಆರೋಗ್ಯ ಕೇಂದ್ರದ ವೈದ್ಯ ಸಿದ್ಧಾರ್ಥ ತಿಳಿಸಿದರು.
ನಿರ್ಲಕ್ಷ್ಯ: `ಗ್ರಾಮದಲ್ಲಿ ಇತ್ತೀಚೆಗೆ ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ. ಕಸವನ್ನು ಕೆರೆಯ ಅಂಗಳದಲ್ಲೇ ಸುರಿಯಲಾಗುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕುವುದರಿಂದ ರೋಗ ಹರಡುವ ಭೀತಿ ಉಂಟಾಗಿದೆ.
ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ' ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಉಷಾ ನಾಗರಾಜು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.