ADVERTISEMENT

‘ದೌರ್ಜನ್ಯ ತಡೆಯಲು ವಿಫಲ’

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 19:29 IST
Last Updated 10 ಏಪ್ರಿಲ್ 2018, 19:29 IST
ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ,ಅತ್ಯಾಚಾರ, ಹಲ್ಲೆಯನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಮರ್ಥವಾಗಿ ಕ್ರಮಗೊಳ್ಳದಿರುವುದನ್ನು ವಿರೋಧಿಸಿ ಮಂಗಳವಾರ ಮೈಸೂರು ಬ್ಯಾಂಕ್‌ ವೃತ್ತ ದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ

ಬೆಂಗಳೂರು: ದೇಶದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ನಿರಂತವಾಗಿ ನಡೆಯುತ್ತಿದ್ದರೂ, ಇಂತಹ ಕೃತ್ಯಗಳನ್ನು ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎನ್‌. ಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಶೇಕಡ 2ರಷ್ಟೂ ಶಿಕ್ಷೆಯಾಗದೆ ಅಪರಾಧಿಗಳು ಬಿಡುಗಡೆಯಾಗುತ್ತಿದ್ದಾರೆ. ಸತ್ಯ ಹೀಗಿರುವಾಗ ನ್ಯಾಯಾಲಯದ ತೀರ್ಪಿನಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಬಡ್ತಿ ಮೀಸಲಾಯಿತಿ ಕಾಯ್ದೆಯನ್ನು ಸರ್ಕಾರ ರದ್ದುಗೊಳಿಸದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಹಿತ ಕಾಯಬೇಕು ಎಂದು ಮನವಿ ಮಾಡಿದರು.

ADVERTISEMENT

ಸಂಘಟನೆಯ ಚಂದ್ರಹಾಸ, ವೆಂಕಟಪ್ಪ, ನಾರಾಯಣ, ಸಂಪತ್‌, ಶಿವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.