ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರದ (ಆಧಾರ್) ಅಧ್ಯಕ್ಷ ನಂದನ್ ನಿಲೇಕಣಿ ಅವರು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಅವರ ಎದುರು ನಿಲೇಕಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಹಲವು ದಿನಗಳಿಂದ ನಿಲೇಕಣಿ ಅವರು ಚುನಾವಣಾ ಪೂರ್ವಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾನುವಾರ ಬೆಳಿಗ್ಗೆ 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ಪಕ್ಷದ ಸದಸ್ಯತ್ವ ಸ್ವೀಕರಿಸುವರು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.