ADVERTISEMENT

ನಮ್ಮ ಶಾಲೆಗೆ ಬನ್ನಿ, ಶಿಕ್ಷಣದ ಹಣತೆ ಹಚ್ಚಿ

ಚಿಕ್ಕಬಾಣಾವರ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ ಪೋಷಕರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:30 IST
Last Updated 29 ಮೇ 2018, 19:30 IST
ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು
ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು   

ಬೆಂಗಳೂರು: ‘ನಿಮ್ಮ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿ. ನಮ್ಮ ಮೇಷ್ಟ್ರು ಒಳ್ಳೆ ಪಾಠ ಮಾಡ್ತಾರೆ. ಮಧ್ಯಾಹ್ನ ಊಟ ಕೊಡ್ತಾರೆ. ಸ್ಕೂಲ್ ಯೂನಿಫಾರ್ಮ್‌ ಉಚಿತವಾಗಿ ಕೊಡ್ತಾರೆ. ಖಾಸಗಿ ಶಾಲೆಗಿಂತ ನಮ್ಮ ಸ್ಕೂಲ್ ಚೆನ್ನಾಗಿದೆ’.

ಹೀಗೆಂದು ಚಿಕ್ಕಬಾಣಾವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಪೋಷಕರನ್ನು ಕೋರಿದರು.

ಸರ್ಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯು ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನದಲ್ಲಿ ಉಪಾಧ್ಯಾಯರು ಮತ್ತು ವಿದ್ಯಾರ್ಥಿಗಳು, ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಗ್ರಾಮಸ್ಥರ ಮನವೊಲಿಸಿದರು.

ADVERTISEMENT

‘ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿದೆ. ಕೆಲವು ಖಾಸಗಿ ಶಾಲೆಗಳು ಶಿಕ್ಷಣದ ಹೆಸರಲ್ಲಿ ವ್ಯಾಪಾರ ಮಾಡುತ್ತಿವೆ. ಮಕ್ಕಳಿಗೆ ಬೇರೆ ಬೇರೆ ತರಬೇತಿಗಳನ್ನು ನೀಡುತ್ತೇವೆ ಎಂದು ದುಡ್ಡನ್ನು ವಸೂಲಿ ಮಾಡುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರಿ ಶಾಲೆಗಳು ಒಳ್ಳೆಯ ಶಿಕ್ಷಣವನ್ನು ನೀಡಬೇಕಾಗಿದೆ’ ಎಂದು ಗ್ರಾಮದ ನಿವಾಸಿ ಲತಾ ಹೇಳಿದರು.

‘ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗೆ ಸೇರಿಸುವವರ ಸಂಖ್ಯೆ ಕಡಿಮೆಯಾಗುತ್ತಿತ್ತು. ಈ ಸಲ ಶಾಲೆಗೆ ಸೇರಿದವರ ಸಂಖ್ಯೆ ಹೆಚ್ಚಿದೆ. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದೇವೆ’ ಎಂದು ಶಾಲಾ ಶಿಕ್ಷಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.