ADVERTISEMENT

ನಾರಾಯಣಮೂರ್ತಿ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 20:15 IST
Last Updated 26 ಫೆಬ್ರುವರಿ 2011, 20:15 IST

ಬೆಂಗಳೂರು: ‘ಇನ್ಫೋಸಿಸ್ ಅಧ್ಯಕ್ಷ ಎನ್.ಆರ್. ನಾರಾಯಣ ಮೂರ್ತಿ ಅವರೇ ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ’ ಎಂದು ಸಮ್ಮೇಳನದ ವಿಶೇಷ ಅಧಿಕಾರಿ ಐ.ಎಂ.ವಿಠಲಮೂರ್ತಿ ಹೇಳಿದರು.

ಶುಕ್ರವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು ‘ನಾರಾಯಣಮೂರ್ತಿ ಅವರು ಸಮ್ಮೇಳನವನ್ನು ಉದ್ಘಾಟಿಸುವುದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಸಮ್ಮೇಳನದ ಮಹತ್ವವನ್ನು ವಿವರಿಸಿದ ನಂತರ ಅವರು ಕಾರ್ಯಕ್ರಮ ಉದ್ಘಾಟನೆಗೆ ಒಪ್ಪಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಸಂಬಂಧ ಅವರೊಂದಿಗೆ ಚರ್ಚೆ ನಡೆಸಿದ್ದಾರೆ’ ಎಂದು ತಿಳಿಸಿದರು.

ದುಬೈ, ಅಮೆರಿಕನ್ನಡಿಗರ ಆಗಮನ: ‘ಸಮ್ಮೇಳನಕ್ಕೆ ಅಮೆರಿಕದಿಂದ ಕಲಾವಿದರು ಸೇರಿದಂತೆ ಸುಮಾರು ನೂರು ಜನ ಭಾಗವಹಿಸಲಿದ್ದಾರೆ. ದುಬೈನಿಂದ 50 ಜನ ಭಾಗವಹಿಸುವ ನಿರೀಕ್ಷೆ ಇದೆ. ದೆಹಲಿ ಮುಂಬೈ ಚೆನ್ನೈ ಹೈದರಾಬಾದ್ ಕೋಲ್ಕತ್ತಾ ಸೇರಿದಂತೆ ಹೊರನಾಡಿನಲ್ಲಿ ನೆಲೆಸಿರುವ ಸುಮಾರು 1500 ಕನ್ನಡಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.