ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರ ಕಚೇರಿಯ ವತಿಯಿಂದ ಇದೇ 25ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಮೂರನೇ ಶನಿವಾರ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ `ಶಿಕ್ಷಣ ಅದಾಲತ್~ ನಡೆಯಲಿದೆ.
ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಹಾಗೂ ಶಾಲಾ ಆಡಳಿತ ಮಂಡಳಿಗಳ ಕುಂದುಕೊರತೆಗಳನ್ನು ಗುರುತಿಸಿ ಪರಿಹಾರ ಸೂಚಿಸಲು ಈ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ಗೆ ಡಿಡಿಪಿಐ ಕಚೇರಿಯಿಂದ ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಬೋಧಕೇತರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ಸಂಬಂಧಪಟ್ಟವರು ಅರ್ಜಿ ಅಹವಾಲುಗಳನ್ನು ನಿಗದಿತ ಅವಧಿಯಲ್ಲಿ ನಿಯೋಜಿತ ಸಿಬ್ಬಂದಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿ ಸ್ವೀಕೃತಿ ಪಡೆಯಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.