ADVERTISEMENT

ನಿಯಮ ಪಾಲಿಸದ 49 ಶಾಲಾ ವಾಹನಗಳ ಜಪ್ತಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:30 IST
Last Updated 6 ಡಿಸೆಂಬರ್ 2013, 19:30 IST

ಬೆಂಗಳೂರು: ನಗರದ ಕೇಂದ್ರ ವಿಭಾಗದ ವಿವಿಧೆಡೆ ಶುಕ್ರವಾರ ಶಾಲಾ ವಾಹನಗಳನ್ನು ತಪಾಸಣೆ ಮಾಡಿದ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಓ) ಅಧಿಕಾರಿಗಳು ಸುರಕ್ಷತಾ ನಿಯಮಗಳನ್ನು ಪಾಲಿಸದ 49 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಸಿಬ್ಬಂದಿ ಪ್ರಾದೇಶಿಕ ಸಾರಿಗೆ (ಕೇಂದ್ರ ವಿಭಾಗ) ಅಧಿಕಾರಿ ಕೆ.ಟಿ.ಹಾಲಸ್ವಾಮಿ ಅವರ ನೇತೃತ್ವದಲ್ಲಿ ರಿಚ್ಮಂಡ್‌ ಟೌನ್‌, ಸೇಂಟ್‌ ಮಾರ್ಕ್ಸ್‌ ರಸ್ತೆ, ಕೋರಮಂಗಲ, ರೆಸಿಡೆನ್ಸಿ ರಸ್ತೆ, ಲಕ್ಕಸಂದ್ರ, ಶಾಂತಿನಗರ, ವಿಲ್ಸನ್‌ಗಾರ್ಡನ್‌ನಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ಶಾಲಾ ವಾಹನಗಳನ್ನು ಪರಿಶೀಲಿಸಿದರು.

ಪ್ರಥಮ ಚಿಕಿತ್ಸೆ ಪೆಟ್ಟಿಗೆ ಮತ್ತು ತುರ್ತು ನಿರ್ಗಮನ ದ್ವಾರವಿಲ್ಲದ, ಸರಕು ಸಾಗಣೆ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಅಳವಡಿಸಿದ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಅಧಿಕಾರಿಗಳು ದೂರು ದಾಖಲಿಸಿದರು.

ಅಲ್ಲದೇ, ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದರು.
‘ಶಾಲಾ ಮಕ್ಕಳ ಸುರಕ್ಷತೆಗಾಗಿ ರೂಪಿಸಿರುವ ನಿಯಮಗಳನ್ನು ಪಾಲಿಸದ 23 ವಾಹನಗಳನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಲಾಯಿತು. ಶನಿವಾರವೂ ತಪಾಸಣಾ ಕಾರ್ಯ ಮುಂದುವರಿಯಲಿದೆ’ ಎಂದು ಹಾಲಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.