ADVERTISEMENT

ನಿರುದ್ಯೋಗಿಗಳ ಗಣತಿ ಮಾಡಿ

ಶಿವಮೂರ್ತಿ ಮುರುಘರಾಜೇಂದ್ರ ಶರಣರ ಸಲಹೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:27 IST
Last Updated 2 ಸೆಪ್ಟೆಂಬರ್ 2013, 19:27 IST
ಬೆಂಗಳೂರಿನ ಬಸವಶ್ರೀ ಚಾರಿಟಬಲ್ ಟ್ರಸ್ಟ್, ಅಕ್ಕಮಹಾದೇವಿ ಮಹಿಳಾ ಸಮಾಜ, ಬಸವಕೇಂದ್ರದ ಆಶ್ರಯದಲ್ಲಿ ಬಾಗಲಗುಂಟೆಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಾ ಪುರಸ್ಕಾರದಲ್ಲಿ ವಿದ್ಯಾರ್ಥಿಗಳಾದ ಪವಿತ್ರಾ, ಐಶ್ವರ್ಯ ಅವರನ್ನು ಗೌರವಿಸಲಾಯಿತು.  ಶಿವಗಂಗೆ ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಚಿತ್ರದಲ್ಲಿದ್ದಾರೆ

ಪೀಣ್ಯ ದಾಸರಹಳ್ಳಿ:  `ಜಾತಿವಾರು ಜನಗಣತಿ ಮಾಡುವುದಕ್ಕಿಂತ ರಾಜ್ಯದಲ್ಲಿ ಎಷ್ಟು ಮಂದಿ ಉದ್ಯೋಗಿಗಳು, ನಿರುದ್ಯೋಗಿಗಳು ಇದ್ದಾರೆ ಎಂಬುದನ್ನು ಗಣತಿ ಮಾಡಲು ಸರ್ಕಾರ ಮುಂದಾಗಬೇಕು' ಎಂದು ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಸಲಹೆ ನೀಡಿದರು.

ಬೆಂಗಳೂರಿನ ಬಸವಶ್ರೀ ಚಾರಿಟಬಲ್ ಟ್ರಸ್ಟ್, ಅಕ್ಕಮಹಾದೇವಿ ಮಹಿಳಾ ಸಮಾಜ, ಬಸವಕೇಂದ್ರದ ಆಶ್ರಯದಲ್ಲಿ ಬಾಗಲಗುಂಟೆ ಹೆಸರಘಟ್ಟದ ಶಿವಗಂಗಾ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ, ಶರಣ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, `ಈ ರೀತಿಯ ಜನಗಣತಿ ಮಾಡಿದರೆ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ ಉದ್ಯೋಗ ಇಲ್ಲದವರಿಗೆ ಸ್ವಯಂ ಉದ್ಯೋಗ ಯೋಜನೆಗಳಲ್ಲಿ ತೊಡಗಲು ಉತ್ತೇಜಿಸಬಹುದು' ಎಂದರು.

ನಟ ಡಾ.ಚಿಕ್ಕಹೆಜ್ಜಾಜಿ ಮಹದೇವ್ ಉಪನ್ಯಾಸ ನೀಡಿದರು. ಶಿವಗಂಗೆ ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕೆಜೆಪಿ ರಾಜ್ಯ ಕಾರ್ಯದರ್ಶಿ ಜಿ.ಮರಿಸ್ವಾಮಿ, ಟ್ರಸ್ಟ್ ಅಧ್ಯಕ್ಷ ಬಸವರಾಜಣ್ಣ, ಉಪನ್ಯಾಸಕಿ ಸುಜಾತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.