
ಪ್ರಜಾವಾಣಿ ವಾರ್ತೆನೆಲಮಂಗಲ: ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್‌ನ ನಿಯೋಗ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರನ್ನು ಭೇಟಿ ಮಾಡಿ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವಂತೆ ಕೋರಿ ಮನವಿ ಪತ್ರ ಸಲ್ಲಿಸಿತು.
ಅಸೋಸಿಯೇಷನ್‌ನ ವ್ಯಾಪ್ತಿಯಲ್ಲಿ 300 ಕಾರ್ಖಾನೆಗಳಿದ್ದು, ಒಂದು ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಮತ್ತು ರೂ.10 ಸಾವಿರ ವಾರ್ಷಿಕ ತೆರಿಗೆಯನ್ನು ಪಾವತಿಸಲಾಗುತ್ತಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಎಸ್.ಕೆ. ರೈ ತಿಳಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸದಾನಂದಗೌಡ, ನಿವೇಶನ ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಂಡು ಭವನ ನಿರ್ಮಾಣಕ್ಕೆ ಸಹಕರಿಸುವ ಭರವಸೆ ನೀಡಿದರು ಎಂದು ಉಪಾಧ್ಯಕ್ಷ ಉಮೇಶ್ ತಿಳಿಸಿದರು. ಕಾರ್ಯದರ್ಶಿ ಪಾಟೀಲ್, ನಿರ್ದೇಶಕರಾದ ಗೋವಿಂದರಾಜು, ಇ.ಟಿ.ಕೇರ್ ರಾಜು ಅವರು ನಿಯೋಗದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.