ADVERTISEMENT

ನೀತಿಸಂಹಿತೆ ಪಾಲಿಸಲು ಕರೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2013, 20:04 IST
Last Updated 8 ಏಪ್ರಿಲ್ 2013, 20:04 IST

ಕೃಷ್ಣರಾಜಪುರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು ಮತ್ತು ನಾಗರಿಕರ ಸಹಕಾರ ಅಗತ್ಯ ಎಂದು ಚುನಾವಣಾಧಿಕಾರಿ ಬಿ.ಶಿವಸ್ವಾಮಿ ವಿನಂತಿಸಿದರು.

ಐಟಿಐ ಚಿತ್ರಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ 299 ಮತಗಟ್ಟೆಗಳಿವೆ. 15 ಮತಗಟ್ಟೆಗಳಿಗೆ ಒಬ್ಬ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ನೀತಿಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು   ಎಲ್ಲೆಡೆ ಹದ್ದಿನಕಣ್ಣು ಇಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.