ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:18 IST
Last Updated 24 ಏಪ್ರಿಲ್ 2018, 19:18 IST

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ಶಾಸಕ ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧ ಅಶ್ವತ್ಥನಾರಾಯಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮಾನ್ಯ ಮಾಡಿದೆ.

‘ಅರ್ಜಿದಾರರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದನ್ನು ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠವು, ಬೆಂಗಳೂರಿನ 7ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಿದೆ.

ADVERTISEMENT

‘2013ರ ಏಪ್ರಿಲ್‌ 22ರಂದು ಅಶ್ವತ್ಥನಾರಾಯಣ ಮಲ್ಲೇಶ್ವರದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡಿದ್ದಾರೆ’ ಎಂದು ಆರೋಪಿಸಿ ಸುಬ್ರಮಣ್ಯನಗರ ಪೊಲೀಸರು ಅಶ್ವತ್ಥನಾರಾಯಣ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದ್ದರು. ಇದನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.