ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಹೆಗ್ಗಡೆ ನಗರದ ಪಕ್ಷದ ಕಚೇರಿಯ ಸಮೀಪದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಸಿಗದಂತಾಗಿದೆ. ಶ್ರೀಮಂತರು ಹಣತೆತ್ತು ನೀರು ಸರಬರಾಜು ಮಾಡಿಕೊಂಡರೆ, ಬಡಜನರು ನೀರಿಗಾಗಿ ಪರದಾಡುವಂತಾಗಿದೆ. ಇಂತಹ ಜನರಿಗೆ ಉಪಯೋಗವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕ್ಷೇತ್ರದ ಜೆಡಿ(ಎಸ್) ಅಧ್ಯಕ್ಷ ಜೆ.ಎಂ.ಚದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್. ವೇಣುಗೋಪಾಲ್, ಹಿರಿಯ ಉಪಾಧ್ಯಕ್ಷ ಜೋಸೆಫ್, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ, ಮುಖಂಡರಾದ ಉಮೇಶ್, ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.