ADVERTISEMENT

ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:31 IST
Last Updated 6 ಜೂನ್ 2013, 19:31 IST

ಬೆಂಗಳೂರು: ಬಾಣಸವಾಡಿ ಸಮೀಪದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಬುಧವಾರ ಕವಿತಾ (40) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕವಿತಾ, ಉದ್ಯಮಿ ವೀರರಾಜು ಎಂಬುವರ ಪತ್ನಿ. ದಂಪತಿಗೆ ಲೋಕೇಶ್ ಮತ್ತು ಪ್ರಭಾಕರ್ ಎಂಬ ಇಬ್ಬರು ಮಕ್ಕಳಿದ್ದಾರೆ. ಬುಧವಾರ ಮಧ್ಯಾಹ್ನ ಕವಿತಾ ಅವರು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಲೋಕೇಶ್, ಸಂಜೆ ಆರು ಗಂಟೆ ಸುಮಾರಿಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ವೇಳೆ ವೀರರಾಜು ಕೆಲಸದ ನಿಮಿತ್ತ ತಮಿಳುನಾಡಿಗೆ ಹೋಗಿದ್ದರು. ನಗರದ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿರುವ ಲೋಕೇಶ್, ಕೆಲಸಕ್ಕೆ ಹೋಗಿದ್ದರು. ಪ್ರಭಾಕರ್ ಕಾಲೇಜಿಗೆ ಹೋಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

`ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಾಗ ತಾಯಿ ಒಳಗಿನಿಂದ ಬಾಗಿಲಿಗೆ ಚಿಲಕ ಹಾಕಿದ್ದರು. ಹಲವು ಬಾರಿ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೂಡಲೇ ಸ್ನೇಹಿತ ಚೇತನ್‌ಗೆ ಕರೆ ಮಾಡಿ ವಿಷಯ ತಿಳಿಸಿದೆ. ಆತ ಮನೆಗೆ ಬಂದ ನಂತರ ಬಾಗಿಲು ಒಡೆದು ನೋಡಿದಾಗ ತಾಯಿ ನೇಣಿಗೆ ಶರಣಾಗಿದ್ದರು. ಅವರು ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು' ಎಂದು ಲೋಕೇಶ್ ಪೊಲೀಸ್ ವಿಚಾರಣೆಯಲ್ಲಿ ತಿಳಿಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.